ಕಲರವ

Archive for April 2008

ಇದು ಈ ಸಂಚಿಕೆಯ ಸಂಪಾದಕೀಯ

ಕಾಫಿ ಡೇಗಳಲ್ಲಿ, ಹೊಟೇಲುಗಳಲ್ಲಿ, ಸಿನೆಮಾ ಥಿಯೇಟರುಗಳಲ್ಲಿ, ಹಾಸ್ಟೆಲ್ಲಿನ ಕಿಕ್ಕಿರಿದ ರೂಮುಗಳಲ್ಲಿ, ಮೊಬೈಲುಗಳಲ್ಲಿ, ಗಂಭೀರ ಚರ್ಚೆಗಳಲ್ಲಿ, ಬೀದಿ ದೀಪದ ಅಡಿಯ ಬೆಳಕಿನಲ್ಲಿ ಗುಂಪು ಕಟ್ಟಿದಾಗ ನಾವು ದೇಶದ ಬಗ್ಗೆ ಅಪಾರ ಕಾಳಜಿ ಉಳ್ಳವರ ಹಾಗೆ ಮಾತನಾಡುತ್ತಿರುತ್ತೇವೆ. ‘ಈ ದೇಶದ ಗತಿಯೇ ಇಷ್ಟು, ಇಲ್ಲಿದ್ದುಕೊಂಡು ನಾವು ಉದ್ಧಾರವಾಗುವುದಕ್ಕೆ ಸಾಧ್ಯವಾ? ಇಂತಹ ವ್ಯವಸ್ಥೆಯನ್ನು ನೆಚ್ಚಿಕೊಂಡು ನಾವು ದೇಶವನ್ನು ಉದ್ಧಾರ ಮಾಡಲು ಸಾಧ್ಯವಾಗುತ್ತದಾ? ನಮ್ಮ ದೇಶದ ದೊಡ್ಡ ಸಮಸ್ಯೆಯೆಂದರೆ ರಾಜಕೀಯ. ಈ ಪೊಲಿಟೀಶಿಯನ್ನುಗಳನ್ನು ಲೈನಾಗಿ ನಿಲ್ಲಿಸಿ ಶೂಟ್ ಮಾಡಬೇಕು. [...]

ನಿನ್ನೆಯ ನೆನಪು ನಮ್ಮ ನಾಳೆಗೆ ಬದುಕಿನ ಹಾದಿಗೆ ಬೆಳಕಾಗಲೇ ಬೇಕಂತೇನೂ ಇಲ್ಲ. ಆದರೆ ನೆನಪುಗಳನ್ನು ಮೆಲಕು ಹಾಕುವುದರಲ್ಲಿಯೇ ಎಂಥದ್ದೋ ಒಂದು ಬಗೆಯ ಸಂತೃಪ್ತಿಯಿದೆ. ಸಮಾಧಾನವಿದೆ. ಪುಳಕವಿದೆ. ಕಳೆದ ದಿನಗಳ ನೆನಪಿನ ಹಂಗಿನಲ್ಲಿ ಮೆಲುವಾಗಿ ನರಳುವ ಅಂಕಣ ‘ಬೀಥೆ ಹುಯೆ ದಿನ್…’. ತಮ್ಮ ಬರವಣಿಗೆಯ ಪ್ರಾರಂಭವನ್ನು ನಯವಾಗಿ ನೇವರಿಸುತ್ತಾ ಅರ್ಧಕ್ಕೆ ನಿಲ್ಲಿಸಿದ ಕಥೆಗಳ ನೆನಪನ್ನು ಮೆಲುಕು ಹಾಕಿದ್ದಾರೆ ‘ಅಂತರ್ಮುಖಿ.’

ಬರವಣಿಗೆಯ ಗೀಳು ನನಗೆ ಹತ್ತನೆಯ ಎಂಟನೆಯ ತರಗತಿಯ ಆಸುಪಾಸಿನಲ್ಲೇ ಹತ್ತಿಕೊಂಡಿತ್ತಾದರೂ ಹತ್ತನೆಯ ತರಗತಿಗೆ ಕಾಲಿಡುವಷ್ಟರಲ್ಲಿ ಅದು ಜ್ವರದಂತೆ ಏರಿತ್ತು. [...]

ಕೆಲವು ಸಲ ಹಾಗಾಗುತ್ತದೆ. ಮನಸ್ಸಲ್ಲಿ ಹುಟ್ಟಿದ ಭಾವಕ್ಕೆ ಅಭಿವ್ಯಕ್ತಿಯ ಸ್ವಾತಂತ್ರ್ಯ ಕೊಡದಿದ್ದರೆ ಅದು ಒಳಗೊಳಗೇ ನಮ್ಮನ್ನು ತಿನ್ನತೊಡಗುತ್ತದೆ. ಅಂಥದ್ದನ್ನು ಒಮ್ಮೆ ಹೊರಗೆಡವಿಬಿಟ್ಟರೆ ಮನಸ್ಸಿಗೆ ನಿರಾಳ. ‘ನೆನೆಯದೆ ಇರಲಿ ಹ್ಯಾಂಗ…?‘ ಎನ್ನುತ್ತಾರೆ ‘ಅಂತರ್ಮುಖಿ’.

ಪ್ರೈಮರಿ ಸ್ಕೂಲಿನಲ್ಲಿದ್ದಾಗ ನಮ್ಮ ಕನ್ನಡ ಮೇಷ್ಟ್ರ ಒತ್ತಾಯಕ್ಕಾಗಿ ಒಂದೆರಡು ಪ್ರಬಂಧಗಳನ್ನು, ಪ್ರಾಸಕ್ಕೆ ಜೋತುಬಿದ್ದ ನಾಲ್ಕೈದು ಕವನಗಳನ್ನು ಬರೆದಿದ್ದೆ. ತರಗತಿಯಲ್ಲಿದ್ದ ನಮ್ಮೆಲ್ಲರಿಗೂ ಅವರು ಹೋಂ ವರ್ಕ್ ಎಂಬಂತೆ ಒಂದೊಂದು ವಿಷಯ ಕೊಟ್ಟು ಪ್ರಬಂಧ ಬರೆದು ತರಲು ಹೇಳುತ್ತಿದ್ದರು. ಕೆಲವರಿಗೆ ಚಿತ್ರಗಳನ್ನು ಬರೆದುಕೊಡಲು ಹೇಳುತ್ತಿದ್ದರು. ಅವುಗಳಲ್ಲಿ ಆಯ್ದು ಕೆಲವನ್ನು [...]

ಕಳೆದ ಸಂಚಿಕೆಯಿಂದ ಮುಂದುವರೆದದ್ದು…
ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ. ನಿನ್ನ ನನ್ನ ಸಂಬಂಧದ ಹಸಿ ಮಣ್ಣಿನಲ್ಲಿ ಚಿಗುರೊಡೆದಿದ್ದ ಪರಿಚಿತತೆ ಎಂಬ ಹುಲ್ಲಿನ ಎಸಳಿಗೆ ಹೆಸರನ್ನಿಟ್ಟುಬಿಡುವ ನಿನ್ನ ಉದ್ವೇಗ ಕಂಡು ನನಗೆ ನಿಜಕ್ಕೂ ದಿಗಿಲಾಗಿತ್ತು. ನಿನ್ನೊಂದಿಗೆ ನಾನು ಲ್ಯಾಬಿನಲ್ಲಿ, ಲಂಚ್ ಟೈಮಿನ ಹರಟೆಯಲ್ಲಿ, ಅಪರೂಪದ ಕಂಬೈನ್ಡ್ ಸ್ಟಡಿಯಲ್ಲಿ ಕಳೆಯುತ್ತಿದ್ದ ಸಮಯದಲ್ಲಿ ನಮ್ಮಿಬ್ಬರ ಮಧ್ಯೆ ಆವರಿಸಿಕೊಳ್ಳುತ್ತಿದ್ದ ಆಹ್ಲಾದವಿದೆಯಲ್ಲಾ, ಅದನ್ನು ನಾನು ಇಂದಿಗೂ ಅನುಭವಿಸಲು ಹಪಹಪಿಸುತ್ತೇನೆ. ಆ ದಿನಗಳಲ್ಲಿ ನಿನ್ನ ಜೊತೆಗೆ ಇರುವಾಗ ಯಾರೇನಂದುಕೊಳ್ಳುವರೋ ಎನ್ನುವ ಭಯವಿತ್ತೇ ವಿನಃ ನೀನು ನನ್ನ ಬಗ್ಗೆ ಏನಂದುಕೊಳ್ಳುವಿಯೋ ಎಂಬ [...]

ಏಪ್ರಿಲ್ ಒಂದು ಯಾರ ದಿನ?

Posted by: uniquesupri on: April 24, 2008

`ನಗೆ ನಗಾರಿ ಡಾಟ್ ಕಾಮ್’ ಎಂಬ ಬ್ಲಾಗನ್ನು ತೆರೆದು ಹಾಸ್ಯದ ಉಣಿಸನ್ನು ಕನ್ನಡಿಗರಿಗೆ ಉಣಬಡಿಸುತ್ತಿರುವ ನಗೆ ಸಾಮ್ರಾಟರು ‘ಕಲರವ’ಕ್ಕಾಗಿ ಏಪ್ರಿಲ್ ಒಂದರ ಪ್ರಯುಕ್ತ ಹಾಸ್ಯ ಲೇಖನವೊಂದನ್ನು ಕಳುಹಿಸಿಕೊಟ್ಟಿದ್ದಾರೆ.

ಮತ್ತೊಂದು ಏಪ್ರಿಲ್ ಒಂದು ಬಂದಿದೆ. ಏಪ್ರಿಲ್ ಒಂದು ಬರುವುದು ವರ್ಷಕ್ಕೆ ಒಂದೇ ಸಾರಿಯೇ ಆದರೂ ಆ ದಿನದ ಮಹತ್ವವನ್ನು ಅಲ್ಲಗಳೆಯಲಾಗದು. ಆ ದಿನವನ್ನು ‘ಮೂರ್ಖ’ರಿಗಾಗಿ ಮೀಸಲಿಟ್ಟಿರುವುದು ನಿಜಕ್ಕೂ ಅಭಿನಂದನಾರ್ಹವಾದ ಹಾಗೂ ಅತ್ಯಂತ ಸೂಕ್ತವಾದ ಸಂಗತಿ. ಜಗತ್ತಿನಲ್ಲಿ ಎಂಥೆಂಥವರಿಗೋ ಒಂದಿಡೀ ದಿನವನ್ನು ಮೀಸಲಿಡುವ ಪರಿಪಾಠ ಇದೆ. ‘ವ್ಯಾಲೆಂಟೈನ್ಸ್ ಡೇ’ ಅಂತೆ, ‘ಮದರ್ಸ್ [...]

ಅವರು ಸ್ವರ್ಗದ ಮಕ್ಕಳೇ!

Posted by: uniquesupri on: April 24, 2008

ತಾವು ನೋಡಿದ ಮಾಜಿದ್ ಮಜಿನಿ ನಿರ್ದೇಶನದ ಚಿತ್ರ children Of Heaven ಬಗೆಗಿನ ತಮ್ಮ ಅನುಭವವನ್ನು ಇಲ್ಲಿ ದಾಖಲಿಸಿರುವವರು ಚಿತ್ರ.

ಕೆಲವು ಮಕ್ಕಳ ಚಿತ್ರಗಳೇ ಹಾಗಿರುತ್ತವೆ. ಅವು ಮಕ್ಕಳಿಗೆ ಮಾತ್ರ ಮನರಂಜನೆಯ, ಬೋಧನೆಯ ನೀಡುವುದಿಲ್ಲ. ಅದರ ಜೊತೆಗೇ ದೊಡ್ಡವರನ್ನೂ ಆಕರ್ಷಿಸುತ್ತವೆ. ಎಲ್ಲಾ ವಯೋಮಾನದವರನ್ನೂ ಮರುಳು ಮಾಡುತ್ತವೆ. ವಯಸ್ಕರಿಗೆ ತಮ್ಮ ಬಾಲ್ಯದ ನವಿರಾದ ನೆನಪುಗಳನ್ನು ಹೆಕ್ಕಿಕೊಡುತ್ತವೆ. ಕಳೆದು ಹೋದ ಬಾಲ್ಯದ ಮುಗ್ಧತೆಯನ್ನು, ಅಭೋಧತೆಯನ್ನು ನೆನಪಿಸಿ ಕಣ್ಣು ತೇವವಾಗಿಸುತ್ತವೆ, ಮನಸ್ಸನ್ನು ಎಲ್ಲಾ ಬಗೆಯ ಒತ್ತಡಗಳಿಂದ ಬಿಡಿಸಿ ಸಡಿಲಾಗಿಸುತ್ತವೆ. ಅಂಥದ್ದೊಂದು ಸಿನೆಮಾವನ್ನು ಜಗತ್ತಿಗೆ [...]

ಈ ಲೇಖನದ ಲೇಖಕರು ಅರುಣ್ ಕುಮಾರ್ ಢಗೆ.

ಪ್ರೀತಿ… ಈ ಪದವನ್ನು ಕೇಳಿದಾಕ್ಷಣ ನಮ್ಮ ಮನಸ್ಸೆಲ್ಲಾ ಪುಳಕಗೊಳ್ಳುವುದು ನಿಜ. ನಾವು ಒಬ್ಬರನ್ನು ಎಷ್ಟೇ ಪ್ರೀತಿಸಿದರೂ, ಅದರ ಬಗ್ಗೆ ಏಷ್ಟೇ ಬರೆದರೂ, ಓದಿದದರೂ, ಅರ್ಥ ಮಾಡಿಕೊಂಡರೂ ಸಾಲದು. ಈ ಹದಿ ವಯಸ್ಸಿನ ಗಂಡು-ಹೆಣ್ಣಿನ ಪ್ರೀತಿಯನ್ನು ಮರ ಮತ್ತು ಬಳ್ಳಿಯ ಅವಲಂಬನೆಗೆ ಹೋಲಿಸಬಹುದು. ಏಕೆಂದರೆ ಮರ ಮತ್ತು ಬಳ್ಳಿ ಬೆಳೆದಷ್ಟೂ ಹತ್ತಿರವಾಗುತ್ತೆ. ಅವುಗಳ ಸಂಬಂಧ ಇನ್ನೂ ಮಧುರವಾಗುತ್ತಾ ಹೋಗುತ್ತದೆ. ಹಾಗೆಯೇ ಗಂಡು,ಹೆಣ್ಣಿನ ನಡುವಿನ ಪ್ರೀತಿಯು ಸವಿದಷ್ಟೂ ರುಚಿ ಹೆಚ್ಚುತ್ತಾ, ಕಾಲ ಸವೆದಷ್ಟೂ [...]

ಈ ಸಂಚಿಕೆಯ ಚರ್ಚೆ: ಮಹಿಳೆಯ ಉಡುಪು ಹಾಗೂ ಪ್ರಚೋದನೆ. ಮಹಿಳೆ ತೊಡುವ ಪ್ರಚೋದನಾಕಾರಿ ಉಡುಪಿನಿಂದ ಆಕೆಯ ಮೇಲೆ ಅತ್ಯಾಚಾರಗಳು ನಡೆಯುತ್ತಿವೆಯೇ? ಎಲ್ಲಕ್ಕೂ ಮಹಿಳೆಯೇ ಕಾರಣವೇ? ಎಲ್ಲಾ ವಿಷಯಗಳಲ್ಲೂ ಹೆಣ್ಣನ್ನು ಬಲಿಪಶುವಾಗಿಸುವುದೇಕೆ? ಪ್ರಚೋದನೆ ಇರುವುದು ತೊಡುಗೆಯಲ್ಲಾ ಅಥವಾ ಪುರುಷನ ಕಣ್ಣುಗಳಲ್ಲಾ ಎಂದು ಕೇಳುತ್ತಾರೆ ‘ಅಂತರ್ಮುಖಿ’

ಕಳೆದ ವರ್ಷ ಪಾಕಿಸ್ತಾನದಲ್ಲಿ ನಲವತ್ತರ ಆಸುಪಾಸಿನಲ್ಲಿದ್ದ ವ್ಯಕ್ತಿಯೊಬ್ಬ ಕೈಯಲ್ಲಿ ಗನ್ ಅಡಗಿಸಿಟ್ಟುಕೊಂಡು ಬಂದು ದೇಶದ ಮಹಿಳಾ ಮಂತ್ರಿಯೊಬ್ಬಳನ್ನು ಕೊಂದು ಬಿಟ್ಟ.
ಆಕೆ ಜಿಲ್ಲಾ ಹುಮಾ ಉಸ್ಮಾನ್. ಆಕೆ ಮುವತ್ತೈದರ ಆಸುಪಾಸಿನಲ್ಲಿದ್ದ ಹೆಣ್ಣು. ಪಾಕಿಸ್ತಾನವೆಂಬ [...]

ಈ ಸಂಚಿಕೆಯ ಚರ್ಚೆ: ಮಹಿಳೆಯ ಉಡುಪು ಹಾಗೂ ಪ್ರಚೋದನೆ. ಮಹಿಳೆ ತೊಡುವ ಪ್ರಚೋದನಾಕಾರಿ ಉಡುಪಿನಿಂದ ಆಕೆಯ ಮೇಲೆ ಅತ್ಯಾಚಾರಗಳು ನಡೆಯುತ್ತಿವೆಯೇ? ಎಲ್ಲಕ್ಕೂ ಮಹಿಳೆಯೇ ಕಾರಣವೇ? ತನ್ನ ಎಚ್ಚರಿಕೆಯಲ್ಲಿ ತಾನಿರಲು ಹೆಣ್ಣು ಪ್ರಚೋದನಕಾರಿಯಾಗಿ ಬಟ್ಟೆ ತೊಡುವುದನ್ನು ತಪ್ಪಿಸಬೇಕೇ ಹೊರತು ಅದು ಆಕೆಗೆ ಕಟ್ಟಳೆಯಾಗಬೇಕಿಲ್ಲ ಎನ್ನುತ್ತಾರೆ ಸುಪ್ರೀತ್.ಕೆ.ಎಸ್.

ಸಮಾನತೆ, ಸ್ತ್ರೀವಾದದ ಬಗ್ಗೆ ಮಾತನಾಡುವ ಮೊದಲು ನಮ್ಮ ಸಮಾಜ ಸಮಾನತೆಯ ಸಮಾಜವಾ ಎಂಬುದನ್ನು ಕೂಲಂಕುಶವಾಗಿ ಪರಿಶೀಲಿಸಬೇಕು. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಗಂಡಿನ ಸರಿಸಮಾನವಾಗಿ ಓದಬಹುದು, ಕೆಲಸಗಿಟ್ಟಿಸಿಕೊಳ್ಳಬಹುದು, ಸಂಪಾದನೆ ಮಾಡಬಹುದು. ಇದನ್ನೆಲ್ಲಾ ಹೆಮ್ಮೆಯಿಂದ, [...]

ಈ ಟಿವಿಯಲ್ಲಿ ರಾತ್ರಿ ಎಂಟೂ ವರೆಗೆ ‘ಮಂಥನ’ ಎಂಬ ಧಾರಾವಾಹಿ ಪ್ರಸಾರವಾಗುತ್ತಿತ್ತು. ‘ಇದು ಇನ್ನೊಂದು ಮುಕ್ತ’ ಅಂತ ಹೆಸರು ಪಡೆದ ಈ ಧಾರಾವಾಹಿ ಇತ್ತೀಚೆಗೆ ಮುಕ್ತಾಯ ಕಂಡಿತು. ಧಾರಾವಾಹಿಗಳು ಎಂದರೆ ಸಾವಿಲ್ಲದ, ಕೊನೆಯಿಲ್ಲದ ಚಿರಂಜೀವಿಗಳು ಎಂದೇ ಜನರು ಭಾವಿಸಿರುವ ಇತ್ತೀಚಿನ ದಿನಗಳಲ್ಲಿ ಒಂದು ಧಾರಾವಾಹಿ ಮುಕ್ತಾಯವಾಯ್ತಂತೆ ಎಂದು ಕೇಳಿದರೇನೇ ಆಶ್ಚರ್ಯವಾಗುತ್ತದೆ!
ಈ ‘ಮಂಥನ’ದ ಬಗೆಗೊಂದು ಪುಟ್ಟ ಟಿಪ್ಪಣಿ, ಒಂದೊಳ್ಳೆ ಧಾರಾವಾಹಿಯ ನೆನಪಿಗಾಗಿ… ‘ಮಂಥನ’ದಪಾತ್ರಗಳ ಸಂಭಾಷಣೆ ಮೊದಲ ವೀಕ್ಷಣೆಯಲ್ಲೇ ನಮ್ಮ ಗಮನವನ್ನು ಸೆಳೆದುಬಿಡುತ್ತದೆ. ತುಂಬಾ ನಾಟಕೀಯ ಎನ್ನಿಸುವಂತಹ ಸಂಭಾಷಣೆಗಳು, ಗ್ರಾಂಥಿಕ [...]


Blog Stats

  • 13,367 hits

 

April 2008
M T W T F S S
« Mar   May »
 123456
78910111213
14151617181920
21222324252627
282930