Posted by: ರಂಜಿತ್ on: June 27, 2009
| - ಜ್ಞಾನಮೂರ್ತಿ, ಬೆಂಗಳೂರು. |
ನಿನ್ನ ಒಳ ಜಗತ್ತಿನಲ್ಲೆಲ್ಲ ಮೂಡಿರುವ ನನ್ನುಸಿರ
ಹೆಜ್ಜೆಗಳು
ಆತನ ಸ್ಪರ್ಶಕ್ಕೆ ಮಾಸುವ ಮುನ್ನ ನೋವ
ಪೆಟ್ಟಿಗೆಯಲ್ಲಿ ಬಚ್ಚಿಟ್ಟುಕೋ
ಏಕಾಂತದಿ ನನ್ನ ಜೊತೆ ಮಿಂದು ಬಂದ
ಮನಸ್ಸನ್ನು
ಸಪ್ಪಳವಿಲ್ಲದೆ ಒಳಕರೆದುಕೋ
ಆತ ಎಚ್ಚರವಾಗುವ ಮುನ್ನ ಮನಸ್ಸಿನ
ಮೈತೊಳೆದು
ಹೊಸ ಬಟ್ಟೆ ತೊಡಿಸಿಬಿಡು
ನನ್ನ ನೆನಪುಗಳ ನಿನ್ನ ಮಗುವಿನ
ಆಟಿಕೆಗಳಾಗಿಸುವುದಾದರೆ
ಅವುಗಳೆಲ್ಲ ಆತನ ಕಾಲ್ತುಳಿತಕ್ಕೆ ಸಿಗದಂತೆ
ಎಚ್ಚರವಹಿಸು!
ನಿನ್ನೊಳಗಣ ನನ್ನ ನೆನಪ ಮೊಟ್ಟೆಗಳಿಗೆ
ಕಾವುಕೊಡುವುದ
ನಿಲ್ಲಿಸಿಬಿಡು
ಇಲ್ಲವಾದರೆ ಮೊಟ್ಟೆಯೊಡೆದ ಜೀವಗಳು ಆತನಿಗೆ
ಸತ್ಯ ಹೇಳಿಬಿಟ್ಟಾವು!
ಹರಿದ ನನ್ನ ನೆನಪುಗಳ ನೀ ಹೊಲೆಯುವಾಗ
ಆತ
ಸೂಜಿಮೊನೆಯಾಗಿ ಚುಚುತ್ತಾನೆ
ಈ ನೋವಲ್ಲೂ ನಾನು ನಿನ್ನ ಕೈ ಕೌದಿಯಾಗಿ
ಅರಳುತ್ತೇನೆ!
ಚೇತನಾ ಅಕ್ಕ,
ಧನ್ಯವಾದಗಳು ಕವನವನ್ನು ಮೆಚ್ಚಿದ್ದಕ್ಕೆ…
ಕವನವನ್ನು ಕಲರವ ಇ-ಪತ್ರಿಕೆಗೆ ಪ್ರಕಟಿಸಿದ ರಂಜಿತ್ ಅಡಿಗರಿಗೂ ಧನ್ಯವಾದಗಳು….
June 27, 2009 at 11:09 am
chennAgide