Posted by: ರಂಜಿತ್ on: July 23, 2009
ಊಫ್ .. ಈ ಜನಕ್ಕೆ ಯಾವ್ ಟೈಮ್ ನಲ್ಲಿ ಏನ್ ಮಾತಾಡ್ಬೇಕು ಅನ್ನೋದೇ ಗೊತ್ತಾಗಲ್ಲ ….ಇಷ್ಟು ದಿನ ನಾನು ಶಾಂತಿ ಬಗ್ಗೆ ಬರೆದ ಎಲ್ಲ ಲೇಖನಗಳನ್ನು ಅವಳಿಗೆ ತಿಳಿಯದಂತೆ ಸೇಫ್ ಲಾಕರನಲ್ಲಿ ಇಟ್ಟಿದ್ದೆ . ಮೊನ್ನೆ ಶನಿವಾರ ಸಂತೆಗೆ ಇವಳನ್ನು ಕರೆದುಕೊಂಡು ಹೋದಾಗ ಭಾದ್ರಪದ ಮಾಸ ಬರದಿದ್ದರೂ ಸಡನ್ನಾಗಿ ಗಣೇಶ ವಕ್ಕರಿಸಿಕೊಂಡು ಬಿಟ್ಟ . “ಏನ್ ಅತ್ತಿಗೆ ?? ನುಗ್ಗೆಕಾಯಿ ಖರೀದೀನಾ ??? ಎಂದು ಕೇಳಿ ಬಿಡೋದೇ ??. ನನ್ನ ಕಣ್ಸನ್ನೆ ನೋಡ್ತಾನೆ ಇಲ್ಲ ……. ಯಾಕೋ [...]
Posted by: ರಂಜಿತ್ on: July 20, 2009
ನಾನು ನನ್ನ ಸಂಸಾರ
———————–
ಭಾನುವಾರ ಬೆಳಿಗ್ಗೆ Breaking News ನ ಹುಡುಕಾಟದಲ್ಲಿ News Paper ಓದುತ್ತ Hall
ನಲ್ಲಿ ಕೂತಿದ್ದೆ . ಆದರೆ ಆ Breaking News ನಮ್ಮ ಮನೆಯಲ್ಲೇ ನಡೆಯುತ್ತದೆಂದು
ಕನಸಿನಲ್ಲೂ ಯೋಚಿಸಿರಲಿಲ್ಲ . “ರೀ … ಇವತ್ತು ಉಪ್ಪಿಟ್ಟು ಮಾಡುತ್ತೇನೆ … ಅಡುಗೆ
ಮನೆಯಿಂದ ನನ್ನವಳು ಉಲಿದಳು. ಎದೆ ಝಾಲ್ಲೆಂದಿತು!!!!! ತಕ್ಷಣ ಮೊಬೈಲ್ ಫೋನ್ ನ
Contact list ನಲ್ಲಿದ್ದ ಎಲ್ಲರಿಗೂ ಕರೆ ಮಾಡಿ ಮಾತಾಡಿದೆ . “ಏನೋ ….. ಬೆಳಿಗ್ಗೆ
ಬೆಳಿಗ್ಗೆ ಫೋನ್ ಮಾಡಿ ಬಿಟ್ಟಿದ್ದೀಯಾ !!!!! ಎಂದು ಎಲ್ರೂ ಕೇಳಿದ್ರು [...]
Posted by: uniquesupri on: December 26, 2008
- ‘ಅಂತರ್ಮುಖಿ’
‘ಎಷ್ಟನೆ ಸಲದ ದಂಡ ಯಾತ್ರೆಯಪ್ಪಾ ಇದು?’ ಹಾಗಂತ ಕಾಫಿಗೆ ಕರೆಯುವ ಗೆಳೆಯರನ್ನು ರೇಗಿಸುತ್ತಿರುತ್ತೇನೆ. ಹಾಸ್ಟೆಲ್ಲಿನ ಹುಡುಗರು ಕಾಫಿಗೆ ಹೋಗುವ ಸಂಭ್ರಮವೇ ಬೇರೆ. ಬೆಳಿಗಿನ ಚಳಿಯಲ್ಲಿ ಧೈರ್ಯ ಮಾಡಿ ಎದ್ದವರು ಮಾಡಿಟ್ಟ ಕಾಫಿಯನ್ನು ತಮ್ಮ ಕೆಪಾಸಿಟಿಗೆ ತಕ್ಕಂತ ಹೀರಿಬಿಟ್ಟಿರುತ್ತರಾದ್ದರಿಂದ ನನ್ನಂಥ ಸೂರ್ಯದ್ವೇಷಿಗಳಿಗೆ, ಏಳು ಗಂಟೆಯ ಮೊದಲು ಎದ್ದು ಬಿಡುವುದು ನೈತಿಕ ಅಧಃಪಥನ ಎಂದು ಭಾವಿಸಿರುವವರಿಗೆ ಖಾಲಿ ಕಾಫಿ ಜಗ್ ಮಾತ್ರ ಕಾದಿರುತ್ತದೆ!
ಎಲ್ಲಾ ಹುಡುಗರು ಇದ್ದಾಗ ಹಾಸ್ಟೆಲ್ಲಿನ ವಾತಾವರಣ ಕಲಕಲ ಎನ್ನುತ್ತಿರುತ್ತದೆ. ಎಲ್ಲರಿಗೂ ಕಾಲೇ ಜು ರಜೆಯಿದ್ದರೆ, ಇಲ್ಲವೇ [...]
Posted by: uniquesupri on: September 27, 2008
- ನಗೆ ಸಾಮ್ರಾಟ್
ಗಣೇಶ ಚತುರ್ಥಿಯ ಹಬ್ಬದ ಸಂಭ್ರಮದಲ್ಲೇ ಬಿಡುವು ಮಾಡಿಕೊಂಡು ವಿನಾಯಕ ನಗೆ ನಗಾರಿಗಾಗಿ ಕೊಟ್ಟ ಎಕ್ಸ್‌ಕ್ಲೂಸಿವ್‌ಸಂದರ್ಶನದ ಪೂರ್ಣ ಪಾಠ ಇಲ್ಲಿದೆ.
ನಗೆ ಸಾಮ್ರಾಟ್: ಗಜಮುಖ, ವಿನಾಯಕ, ಮೂಷಿಕವಾಹನನಿಗೆ ಶರಣು ಶರಣು.
ವಿನಾಯಕ: ನಮಸ್ಕಾರ ನಮಸ್ಕಾರ ನಮಸ್ಕಾರ!
ನ.ಸಾ: ಏನು ಲಾರ್ಡ್ ಇದು, ಸಿನೆಮಾ ಹೀರೋ ಗಣೇಶ್ ಸ್ಟೈಲಲ್ಲಿ ನಮಸ್ಕಾರ?
ವಿ: ಹೌದು, ಹೌದು ಈ ಭೂಲೋಕದವರಿಗೆ ಅವರದೇ ಧಾಟಿಯಲ್ಲಿ ಮಾತಾಡಿಸಬೇಕು. ಆಗಲೇ ಆಪ್ತತೆ ಬೆಳೆಯೋದು. ಈ ಸತ್ಯವನ್ನು ನಾನು ತುಂಬಾ ಹಿಂದೇ ಕಂಡುಕೊಂಡೆ ಆದ್ರೆ ನಮ್ಮ ಇತರ ದೇವರುಗಳಿಗೆ ಇದು [...]
Recent Comments