ಕಲರವ

ಶಾಂತಿ ಮಂತ್ರ!

Posted on: ಜುಲೈ 23, 2009

ಊಫ್ .. ಈ ಜನಕ್ಕೆ ಯಾವ್ ಟೈಮ್ ನಲ್ಲಿ ಏನ್ ಮಾತಾಡ್ಬೇಕು ಅನ್ನೋದೇ ಗೊತ್ತಾಗಲ್ಲ ….ಇಷ್ಟು ದಿನ ನಾನು ಶಾಂತಿ ಬಗ್ಗೆ ಬರೆದ ಎಲ್ಲ ಲೇಖನಗಳನ್ನು ಅವಳಿಗೆ ತಿಳಿಯದಂತೆ ಸೇಫ್ ಲಾಕರನಲ್ಲಿ ಇಟ್ಟಿದ್ದೆ . ಮೊನ್ನೆ ಶನಿವಾರ ಸಂತೆಗೆ ಇವಳನ್ನು ಕರೆದುಕೊಂಡು ಹೋದಾಗ ಭಾದ್ರಪದ ಮಾಸ ಬರದಿದ್ದರೂ ಸಡನ್ನಾಗಿ ಗಣೇಶ ವಕ್ಕರಿಸಿಕೊಂಡು ಬಿಟ್ಟ . “ಏನ್ ಅತ್ತಿಗೆ ?? ನುಗ್ಗೆಕಾಯಿ ಖರೀದೀನಾ ??? ಎಂದು ಕೇಳಿ ಬಿಡೋದೇ ??. ನನ್ನ ಕಣ್ಸನ್ನೆ ನೋಡ್ತಾನೆ ಇಲ್ಲ ……. ಯಾಕೋ ಗಣೇಶ ಹೀಗೆ ಯಾಕೆ ಕೇಳ್ತಾ ಇದ್ದೀಯಾ ?? ಎಂದು ಇವಳು ಕೇಳಿದಾಗ ಮಗ್ಗಿ ಕಂಠಪಾಠ ಹೊಡೆದಂತೆ ನನ್ನ ಲೇಖನದ ಎಲ್ಲ ಜೋಕುಗಳನ್ನು ಕಕ್ಕಿಬಿಟ್ಟ ….. ಏನ್ ಚೆನ್ನಾಗಿ ಬರೆದಿದ್ದಾರೆ ನಿಮ್ ಮನೆಯವರು ಅಂತ ಹೊಗಳಿಕೆ ಬೇರೆ . ನನಗೆ ನಗುವುದೋ ಅಳುವುದೋ ತಿಳಿಯಲಿಲ್ಲ . ಸಾಯಂಕಾಲ ಮನೆಯಲ್ಲಿ ನನಗೆ ನಡೆದ ಸತ್ಯನಾರಾಯಣ ಪೂಜೆಯ ಬಗ್ಗೆ ಇನ್ಯಾವತ್ತಾದರೂ ಬರೆಯುತ್ತೇನೆ . ಈಗ ಮುನಿಸಿಕೊಂಡ ಶಾಂತಿಯನ್ನು ಒಲಿಸಿಕೊಳ್ಳಲು ಈ ಶಾಂತಿಮಂತ್ರ …..
*************** ಓಂ !!!!! *************
ಮೌನ ಮುರಿದು ಮಾತನಾಡು
ನಗುತ ನನ್ನ ನಲ್ಲೆ
ಮಾತು ಬಿಟ್ಟು ಕೊಲುವೆ ಏಕೆ
ನೀನು ಮೌನದಲ್ಲೇ ??
ಸಿಟ್ಟಲ್ಲಿ ಯಾಕೆ ಮಾಡ್ಕೊಂಡಿದ್ದಿ
ನೀನ್ ಮೂತೀನ್ ಉಬ್ಬಿದ ಪೂರಿ
ನಿನ್ನೆಯಿಂದ್ ಹೇಳ್ತಿದ್ದೀನಿ
I am very sorry !!!!
ಉಹೂ ಇಲ್ಲ … ಆ ಲೈನು ಕೆಲಸ ಮಾಡಲಿಲ್ಲ . ಕಪಾಟಿನ ಬಟ್ಟೆಗಳು ಸೂಟ್ ಕೇಸ ಒಳಗಡೆ ನುಗ್ಗುತ್ತಿವೆ . ಅದರ ಮಧ್ಯೆ ಇವಳು ಕಣ್ಣೀರು ತುಂಬಿಕೊಂಡು ಹೇಳಿದಳು …
ಆಗ್ಲಿ ಏನೂ ನಾಳೆ ನಾನು
ಹೋಗ್ತೀನಿ ಶಿವಮೊಗ್ಗೆ
ಆಮೇಲೆ ನೀನು ತಂದುಕೊಂಡು ತಿನ್ನು
ಸೌತೆ – ಗುಳ್ಳ- ನುಗ್ಗೆ !!
ಇರಲಿ ಬತ್ತಳಿಕೆಯ ಬೇರೆ ಅಸ್ತ್ರ ಪ್ರಯೋಗ ಮಾಡಬೇಕಾಯ್ತು . ಸ್ವಲ್ಪ ಬೆಣ್ಣೆ ಹಚ್ಚಿದರೆ ಒಲಿಯುತ್ತಾಳೋ ನೋಡೋಣ ಅಂದುಕೊಂಡು ಈ ಸೆಂಟಿ ಡೈಲಾಗು ಹೊಡೆದೆ .
ತವರಿಗೆ ಹೋಗ್ತೀನಂತ ಮಾತ್ರ
ಹೇಳ್ಬೇಡ್ವೆ ನನ್  ರಾಣಿ
ನೀನಿಲ್ದೆ ಬದುಕೊದಿಲ್ವೇ
ಈ ನಿನ್ ಗಂಡ ಅನ್ನೋ ಪ್ರಾಣಿ
ಅಬ್ಬಾ … ಪರಿಸ್ಥಿತಿ ಕರ್ಫ್ಯೂನಿಂದ ಸೆಕ್ಷನ್ ೧೪೪ ಗೆ ಇಳಿಯಿತು . ಈಗ ಸೃಷ್ಟಿಯಾಗಿದ್ದ ಉದ್ವಿಗ್ನ ವಾತಾವರಣ ಹತೋಟಿಯಲ್ಲಿ ಬಂತು , ಬಟ್ಟೆಗಳು ಸೂಟ್ ಕೇಸ ನಿಂದ ಕಪಾಟು ಸೇರಿಕೊಂಡವು . ಆದರೆ ಬೆಳಿಗ್ಗೆಯಿಂದ ಒಳಗಡೆ ಜಪ್ತಿಯಾಗಿದ್ದ ಸಿಟ್ಟು ಒಮ್ಮೆಲೇ ಹೊರಬಂದಿತು .
ಊಟಕ್ಕೆ ನಾನು ಬಡ್ಸೋದಿಲ್ಲ
ಅನ್ನದ ಒಂದೂ ಅಗುಳು
ಇಲ್ಲಿವರ್ಗೂ ನನ್ನನ್ ಬೈಕೊಂಡ್
ನೀನ್ ಏನೇನ್ ಬರೆದೆ ಬೊಗಳು
ಇಷ್ಟು ಹೇಳಿ ಮುಖ ತಿರುಗಿಸಿ ಮತ್ತೆ ಮೌನವೃತ ಧಾರಣೆ ಮಾಡಿದಳು ಹೆದರಿಬಿಟ್ಟೆ !!! ಕಣ್ಣಿನಲ್ಲಿ ಜ್ವಾಲಾಮುಖಿ …. ನವರಾತ್ರಿಗೆ 3 ತಿಂಗಳು ಇರಬೇಕಾದ್ರೆನೆ ನನಗೆ ದುರ್ಗೆಯ ದರ್ಶನ. ಇರಲಿ ಇವಳ ಸಿಟ್ಟು ನನಗೆ ಗೊತ್ತಿಲ್ವೆ ??? ನಾನು ಮುಂದುವರಿಸಿದೆ .
ಶಾಂತಿ ಅನ್ನೋ ಹೆಸರಿದ್ರೂ
ನಿನಗ್ಯಾಕೆ ಇಷ್ಟೊಂದು ಕೋಪ ??
ಚಿಕ್ಕ ಪುಟ್ಟ ವಿಷಯಕ್ಕೆ ಯಾಕೆ ತಾಳ್ತಿ
ಮಾಂಕಾಳಿ ಸ್ವರೂಪ ??
ಸ್ವಲ್ಪ ಮುಂಚೆ ಕೂಗ್ತಿದ್ದೆ
ಈಗ್ಯಾಕೆ ಸೈಲೆಂಟ್ ಮೋಡು??
ಇವತ್ತಿಂದ ನಿನಗಾಗಿ ನಾನ್
ಏನೇನ್ ಮಾಡ್ತೀನಿ ನೋಡು
ರನ್ನ ಚಿನ್ನ ಬಂಗಾರಾಂತ
ಪ್ರೀತಿಯಿಂದಲೇ ಕರೀತೀನಿ
“ನನ್ ಹೆಂಡ್ತಿ ನನ್ ಪ್ರಾಣ ” ಅಂತ
ಹೊಸ ಲೇಖನ ಬರೀತೀನಿ
ಉಪ್ಪೇ ಹಾಕದ ಉಪ್ಪಿಟ್
ಕೊಟ್ರು ಚಪ್ಪರಿಸ್ಕೊಂದು ತಿಂತೀನಿ
ಬೆಲ್ಲದ ನೀರಿಗೆ ಪಾಯಸ ಅಂದ್ರೂ
ಸೂಪರ್ ಅಂತ್ಲೇ ಅಂತೀನಿ
ಕಣ್ಣ ಸನ್ನೇಲೆ ಕುಣೀತೀನಿ
ನಾನ್ ನಿನ್ನ ಎಲ್ಲ ತಾಳಕ್ಕೂ
ಕಣ್ಣೀರ್ ಹಾಕದೆ ತಿಂತೀನಿ
ನೀ ಮಾಡಿದ ಪನ್ನೀರ್ ಪಾಲಕ್ಕು
ಮೈಸೂರ್ ಮಲ್ಲಿಗೆ ನಿತ್ಯ ತಂದು
ನಾ ನಿನ್ ತಲೆಗೆ ಮುಡಿಸ್ತೀನಿ
ಎಲ್ಲ ಹಬ್ಬಕ್ಕೂ ರೇಷ್ಮೆ ಸೀರೆ
ತಪ್ಪದೆ ನಾನು ಕೊಡಿಸ್ತೀನಿ
ಸಡನ್ನಾಗಿ ಇವಳಿಗೆ ಗಣೇಶನ ಮಾತುಗಳೆಲ್ಲ ನೆನಪಿಗೆ ಬಂದವೋ ಏನೋ … ಮತ್ತೆ ಶುರು ಹಚ್ಚಿಕೊಂಡಳು
ಡ್ರೈವಿಂಗ್ ಬಗ್ಗೆ ಬರ್ದಿರೋದು
ನಂಗೆ ಚೆನ್ನಾಗಿ ಗೊತ್ತು
ಟ್ರಾಫಿಕ್ ಪೋಲಿಸ್ ಮಗಳನ್ನೇ
ನೀವ್ ಹುಡ್ಕೊಬೇಕಾಗಿತ್ತು .
ಟ್ರಾಫಿಕ್ ಪೋಲಿಸ್ ಮಗಳನ್ನ
ನಾನು ತುಂಬಾ ಪ್ರೀತಿಸ್ತಿದ್ದೆ
ನನ್ ಗ್ರಹಚಾರ ಹಾಳಾಗಿತ್ತು
ನೀನ್ ಬಂದು ನಂಗೆ ಗಂಟು ಬಿದ್ದೆ
ಅನ್ನೋಣ ಎಂದುಕೊಂಡೆ ಆಮೇಲೆ ತಮಾಷೆ ಹೆಚ್ಚಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಕಷ್ಟ ಎಂದುಕೊಂಡು ಈ ಕವನ ಮತ್ತು ಉಕ್ಕಿ ಬರುತ್ತಿದ್ದ ನಗುವನ್ನು ತಡೆದುಕೊಂಡು ಕೆಳಗಿನ ಸಾಲುಗಳನ್ನು ಹೇಳಿದೆ .
ನನಗೂ ನಿನಗೂ ಸೆಟ್ ಆಗೈತೆ
ಏಳೇಳು ಜನ್ಮದ ನಂಟು
offer expire ಆಗಲಿಕ್ಕೆ
ಇನ್ನೂ ಆರು ಜನ್ಮ ಉಂಟು !!
ಅಬ್ಬ !!! ತುಟಿಯಂಚಿನಲ್ಲಿ ಅಪ್ರಯತ್ನವಾಗಿ ಮುಗುಳ್ನಗು ಮಿಂಚಿ ಮರೆಯಾಯಿತು. ಪುನಃ ಸಿಟ್ಟಿನ ನಾಟಕ ಮಾಡತೊಡಗಿದಳು . ನಮ್ಮ ದೇವರ ಬುದ್ಧಿ ನಮಗೆ ಗೊತ್ತಿಲ್ವೆ ??? ಕಬ್ಬಿಣದಂತೆ ಇವಳ ಮುಖ ಕೂಡ ಕೆಂಪಾಗಿದೆ ಒಂದೆರಡು ಪ್ರೀತಿಯ ಮಾತಿನ ಪೆಟ್ಟು ಸಾಕಾಗುತ್ತದೆ ಎಂಬುದನ್ನು ಮನಗಂಡು ಡೈಲಾಗುಗಳನ್ನು ಮುಂದರಿಸಿದೆ.
ನಗಲು ನೀನು ಮರೆಯುವೆ ನಾನು
ಇರುವ ಎಲ್ಲ ನೋವು
ನಿನ್ನ ನಗುವೇ ನನ್ನ ಎದೆಗೆ
ಝಂಡು ಬಾಮು ಮುವೂ (moov )
ನಾನೂ ನಿಂಗೆ ಪ್ರಾಣ ಅನ್ನೋ
ಸತ್ಯಾನ್ನ ನೀನು ಒಪ್ಪಿಕೊ
ಸಿಟ್ಟನ್ ಬಿಟ್ಟು ಮುತ್ತ ನ್ ಕೊಟ್ಟು
ಒಮ್ಮೆ ನನ್ನನ್ನ ಅಪ್ಪಿಕೋ !!! 🙂
ಇಷ್ಟು ಹೇಳುತ್ತಲೇ ನಾಚಿ ನೀರಾಗಿ ನನ್ನವಳು slow motion ನಲ್ಲಿ ನನ್ನ ಬಳಿ ಬಂದಳು . ರೀ ….. ಏನೇ ಹೇಳಿ ಆರ್ಟಿಕಲ್ಲು ಚೆನ್ನಾಗಿತ್ತು . ನೀವು ಆಚೆ ಹೋದಾಗ ಮನಸ್ಸು ತುಂಬಿ ನಕ್ಕುಬಿಟ್ಟೆ ಅಂದಾಗ ನನ್ನ ಲೇಖನಕ್ಕೆ ಜ್ಞಾನಪೀಠ ಪ್ರಶಸ್ತಿ ಸಿಕ್ಕಷ್ಟು ಸಂತೋಷವಾಯಿತು . ಹೀಗೆ ನನ್ನ ಸಮಸ್ಯೆ ದೂರವಾಯಿತು . ಒಂದು ನಿಮಿಷ ತಡೀರಿ ಈ ಗಣೇಶನ ಕುಶಲೋಪಚಾರ ಮಾಡಿ ಬರುತ್ತೇನೆ
*************** ಓಂ ಶಾಂತಿ ಶಾಂತಿ ಶಾಂತಿಃ********************
****************************ವಿಕಟಕವಿ*********************
– ಸುಮಂತ ಶ್ಯಾನುಭೋಗ್, ಮುಂಬೈ.

1 Response to "ಶಾಂತಿ ಮಂತ್ರ!"

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

Blog Stats

  • 71,866 hits
ಜುಲೈ 2009
ಸೋಮ ಮಂಗಳ ಬುಧ ಗುರು ‍ಶು ಶನಿ ಭಾನು
 12345
6789101112
13141516171819
20212223242526
2728293031  

Top Clicks

  • ಯಾವುದೂ ಇಲ್ಲ
%d bloggers like this: